Bangalore| ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿಯ ದಾಬಸ್ಪೇಟೆ ಸಮೀಪದ ಹಳೇ ನಿಜಗಲ್ ಬಳಿ ನಡೆದ ಗಲಾಟೆ ಪ್ರಕರಣದಲ್ಲಿ ಮಾಜಿ ಸಂಸದ ಅನಂತಕುಮಾರ್ ಹೆಗಡೆ ಪುತ್ರ ಅಶುತೋಷ್ ವಿರುದ್ಧದ ಪ್ರಕರಣದ ವಿಚಾರಣೆಗೆ ಹೈ ಕೋರ್ಟ್ ತಡೆ ನೀಡಿದೆ.
ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿಯ ದಾಬಸ್ಪೇಟೆ ಸಮೀಪದ ಹಳೇ ನಿಜಗಲ್ ಬಳಿ ಈಚೆಗೆ ನಡೆದಿದ್ದ ಗಲಾಟೆ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಅವರು ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದತಿ ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.
ಹೆಗಡೆ ಪರ ವಕೀಲ ಪವನ್ಚಂದ್ರ ಶೆಟ್ಟಿ ನ್ಯಾಯಾಲಯದಲ್ಲಿ ವಾದ ಮಂಡಿಸಿ ಮಾಜಿ ಸಂಸದ ಅನಂತಕುಮಾರ್ ಹೆಗಡೆ ಅವರ ಪುತ್ರ ಅಶುತೋಷ್ ಹೆಸರು ಉಲ್ಲೇಖವಾಗಿಲ್ಲ. ಆದರೆ, ಆರೋಪ ಪಟ್ಟಿಯಲ್ಲಿ ನಾಲ್ಕನೇ ಆರೋಪಿ ಎಂದು ಹೇಳಲಾಗಿದೆ. ಆರೋಪ ಪಟ್ಟಿಯಲ್ಲಿ ಅಶುತೋಷ್ ವಿರುದ್ಧ ಯಾವುದೇ ಅಂಶ ಪ್ರಸ್ತಾಪವಾಗಿಲ್ಲ. ಅಶುತೋಷ್ ವಿರುದ್ಧ ಯಾವುದೇ ದಾಖಲೆ ಇಲ್ಲ. ವಿದೇಶದಿಂದ ಭಾರತಕ್ಕೆ ಬಂದಿದ್ದ ಅಶುತೋಷ್ ತನ್ನ ಅಜ್ಜ-ಅಜ್ಜಿಯನ್ನು ನೋಡಲು ಬಂದಿದ್ದರು. ತಾಂತ್ರಿಕ ಕಾರಣಗಳಿಗಾಗಿ, ವಿದ್ಯಾರ್ಥಿ ಅಶುತೋಷ್ ಯಾತನೆ ಅನುಭವಿಸಬಾರದು ಎಂದು ನ್ಯಾಯಾಲಯಕ್ಕೆ ಮನವಿ ಮಾಡಿದರು.
ಎರಡೂ ಕಡೆಯ ವಾದ ಆಲಿಸಿದ ನ್ಯಾಯಾಲಯ ಅಶುತೋಷ್ ವಿರುದ್ಧ ವಿಚಾರಣೆಗೆ ತಡೆ ನೀಡಿದ ನ್ಯಾಯಮೂರ್ತಿ ಎಸ್ ಸುನೀಲ್ ದತ್ ಯಾದವ್ ಅವರ ಏಕಸದಸ್ಯ ಪೀಠವು ವಿಚಾರಣೆಯನ್ನು ಮುಂದೂಡಿ ಆದೇಶಿಸಿತು.
ರಾಸಾಯನಿಕ ಟ್ಯಾಂಕರ್ ಸ್ಫೋಟ : ಹೊತ್ತಿ ಉರಿದ ವಾಹನ, ಚಾಲಕನ ಸುಳಿವು ಇಲ್ಲ
