ಕಾರವಾರ: ಭಾರತೀಯ ಹವಾಮಾನ ಇಲಾಖೆ (IMD) ಜಿಲ್ಲೆಗೆ ನಾಳೆ ಜುಲೈ 24ರಂದು ಗಾಳಿ ಸಹಿತ ಭಾರೀ ಮಳೆಯ ಆರೆಂಜ್ ಅಲರ್ಟ್ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ, ಜಿಲ್ಲೆಯ ಶಿರಸಿ, ಸಿದ್ದಾಪುರ ಹಾಗೂ ಜೊಯಿಡಾ ಸೇರಿದಂತೆ ಮೂರು ತಾಲೂಕುಗಳ ಎಲ್ಲಾ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ನಾಳೆ ಶುಕ್ರವಾರ ಜು.24 ರಂದು ಒಂದು ದಿನ ರಜೆ ಘೋಷಿಸಲಾಗಿದೆ.

ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಹಾಗೂ ಮಳೆಯಿಂದ ಉಂಟಾಗಬಹುದಾದ ಅನಾಹುತಗಳನ್ನು ತಪ್ಪಿಸುವ ಉದ್ದೇಶದಿಂದ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಕೆ.ಲಕ್ಷ್ಮಿಪ್ರಿಯ ಈ ಆದೇಶ ಹೊರಡಿಸಿದ್ದಾರೆ.

ಇದಲ್ಲದೆ, ಘೋಷಿಸಲಾದ ರಜೆಯನ್ನು ಮುಂದಿನ ದಿನಗಳಲ್ಲಿ ಅಗತ್ಯವಿರುವಂತೆ ಹೊಂದಾಣಿಕೆ ಮಾಡಿಕೊಳ್ಳುವಂತೆ ಸಂಬಂಧಿಸಿದ ಇಲಾಖೆಗಳಿಗೆ ನಿರ್ದೇಶನ ನೀಡಲಾಗಿದೆ.