Bangalore| ಉತ್ತರಕನ್ನಡ ಸಹಿತ ರಾಜ್ಯದ ಆರು ಜಿಲ್ಲೆಗಳಲ್ಲಿ ಮುಂದಿನ ಮೂರು ಗಂಟೆಗಳ ಅವಧಿಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಚಾಮರಾಜನಗರ, ಚಿಕ್ಕಮಗಳೂರು, ಮಂಡ್ಯ, ಮೈಸೂರು, ಶಿವಮೊಗ್ಗ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಂದೆರಡು ಕಡೆ ಗುಡುಗು ಸಹಿತ ಭಾರೀ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಕುರಿತು ಶನಿವಾರ ಮಧ್ಯಾಹ್ನ 3.09 ಗಂಟೆಗೆ ಎಚ್ಚರಿಕೆ ಸಂದೇಶ ಬಿಡುಗಡೆ ಮಾಡಲಾಗಿದ್ದು, ಸಂಜೆ 6.09 ಗಂಟೆಯವರೆಗೆ ಮುನ್ಸೂಚನೆ ಜಾರಿಯಲ್ಲಿರಲಿದೆ. ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
