Karwar| ಕರ್ನಾಟಕ ಕರಾವಳಿ ಸೇರಿದಂತೆ ಕೇರಳ ಹಾಗೂ ಲಕ್ಷದ್ವೀಪ ಸಮುದ್ರ ಪ್ರದೇಶಗಳಲ್ಲಿ ಮೇ 17 ಮತ್ತು 18 ರಂದು ಭಾರೀ ಗಾಳಿ ಹಾಗೂ ಅಲೆಗಳ ಅಬ್ಬರ ಹೆಚ್ಚಾಗುವ ಸಾಧ್ಯತೆ ಇರುವ ಹಿನ್ನೆಲೆ ಮೀನುಗಾರರಿಗೆ ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು, ಕೆಲವೆಡೆ ಗಾಳಿಯ ವೇಗ 60 ಕಿ.ಮೀ ವರೆಗೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಕರಾವಳಿ ಭಾಗದ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಇಲಾಖೆ ಸೂಚನೆ ನೀಡಿದೆ. ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.