Karwar| ಇಲ್ಲಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು, ಆತಂಕದ ವಾತಾವರಣ ನಿರ್ಮಾಣವಾಗಿದೆ. ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ಪಡೆ ಆಗಮಿಸಿ ತಪಾಸಣೆ ಕೈಗೊಂಡಿದ್ದಾರೆ.

[email protected] ಎಂಬ ಇ-ಮೇಲ್ ವಿಳಾಸದಿಂದ ಬೆದರಿಕೆ ಸಂದೇಶ ಬಂದಿದ್ದು, ಸಂದೇಶದಲ್ಲಿ ಕೆಲ ಆರೋಪಗಳ ಉಲ್ಲೇಖ ಮಾಡಿ, ಈ ವಿಚಾರಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಲಾಗಿದೆ ಎಂದು ತಿಳಿದುಬಂದಿದೆ.

ಇ-ಮೇಲ್‌ನಲ್ಲಿ ತಮಿಳುನಾಡಿನ ರಾಜಕೀಯ ಮುಖಂಡ ಉದಯನಿಧಿ ಸ್ಟಾಲಿನ್ ಅವರನ್ನು ಬೆಂಬಲಿಸುವ ಚೆನ್ನೈ ಪತ್ರಕರ್ತರ ಕುರಿತು ಉಲ್ಲೇಖಿಸಲಾಗಿದೆ ಎನ್ನಲಾಗಿದೆ.

ಉದಯನಿಧಿ ಸ್ಟಾಲಿನ್ ಅವರ ಬಗ್ಗೆ ಉಲ್ಲೇಖ ಮಾಡಲಾಗಿತ್ತು. ಆದರೆ ಈ ಆರೋಪಗಳ ಕುರಿತು ಯಾವುದೇ ಎಫ್‌ಐಆರ್ ದಾಖಲಾಗಿಲ್ಲ ಎಂದು ಸಂದೇಶದಲ್ಲಿ ಉಲ್ಲೇಖಿಸಲಾಗಿದೆ‌ ಎನ್ನಲಾಗಿದೆ.

ಬೆದರಿಕೆ ಮಾಹಿತಿ ತಿಳಿಯುತ್ತಿದ್ದಂತೆ ಕಾರವಾರ ಪೊಲೀಸರು ಜಿಲ್ಲಾ ನ್ಯಾಯಾಲಯಕ್ಕೆ ತೆರಳಿ ಪರಿಶೀಲನೆ ನಡೆಸಿದರು. ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ತಪಾಸಣೆ ನಡೆಸಿದ್ದಾರೆ. ಇ-ಮೇಲ್ ಬೆದರಿಕೆಯ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ.