Karwar| ಧಾರಾಕಾರ ಮಳೆಯ ಹಿನ್ನೆಲೆ, ಶಾಲಾ ಮಕ್ಕಳ ಸುರಕ್ಷತೆಯ ಹಿನ್ನೆಲೆಯಲ್ಲಿ ಇಂದು ಗುರುವಾರ ಜು.2 ರಂದು ಕಾರವಾರ ತಾಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಗುರುವಾರ ಬೆಳಗ್ಗೆ ನಿಂದ ಭಾರಿ ಮಳೆ ಸುರಿಯುತ್ತಿರುವ ನಿಮಿತ್ತ ಕಾರವಾರ ತಾಲೂಕಿನ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆಯನ್ನು ಘೋಷಿಸಿ ಕಾರವಾರ ಕ್ಷೇತ್ರ ಶಿಕ್ಷಣಾಧಿಕಾರಿ (BEO) ರಜೆ ಆದೇಶಿಸಿದ್ದಾರೆ. ಸದರಿಯ ರಜಾವಧಿಯನ್ನು ಮುಂದಿನ ದಿನಗಳಲ್ಲಿ ಶಾಲೆ ನಡೆಸಿ ಕಲಿಕಾ ದಿನವನ್ನು ಸರಿದೂಗಿಸಿಕೊಳ್ಳಲು ಅವರು ಸೂಚಿಸಿದ್ದಾರೆ.