cm Siddaramaiah ಹಾಗೂ ಉಪ ಮುಖ್ಯಮಂತ್ರಿ D K Shivakumar ಅವರ ಪೋಸ್ಟರ್ ಅನ್ನು ಸ್ಕಾಮ್ ಲಾರ್ಡ್ಸ್ (ಹಗರಣದ ಧಣಿಗಳು) ಎನ್ನುವಂತೆ ಚಿತ್ರಿಸಿ ಬಿಜೆಪಿ ಕರ್ನಾಟಕ ತನ್ನ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿತ್ತು. ಈ ಚಿತ್ರವನ್ನು ಹಾಕಿದ ಒಂದು ದಿನದ ಬಳಿಕ ಇದೀಗ ಬಿಜೆಪಿ ಎಕ್ಸ್ ಖಾತೆಯ ವಿರುದ್ಧ ಪ್ರಕರಣ ದಾಖಲಾಗಿದೆ.

ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಯವರನ್ನು ಅವಹೇಳನಕಾರಿಯಾಗಿ ಚಿತ್ರಿಸಿದ ಆರೋಪದ ಮೇಲೆ ಈ ಪ್ರಕರಣ ದಾಖಲಾಗಿದೆ. ಕರ್ನಾಟಕ ಬಿಜೆಪಿಯ ಎಕ್ಸ್ ಖಾತೆ ವಿರುದ್ಧ ಪ್ರಕರಣ ದಾಖಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಅವಹೇಳನಕಾರಿಯಾಗಿ ಚಿತ್ರಿಸಿದ ಆರೋಪದ ಮೇಲೆ ಈ ಪ್ರಕರಣ ದಾಖಲಾಗಿದೆ.

ಸ್ಕಾಮ್ ಲಾರ್ಡ್ಸ್ ಅಂದರೆ ಹಗರಣದ ಧಣಿಗಳು ಎನ್ನುವಂತೆ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರನ್ನು ಚಿತ್ರಿಸಿ ಬಿಜೆಪಿ ತನ್ನ ಎಕ್ಸ್ ಖಾತೆಯಲ್ಲಿ ಚಿತ್ರವೊಂದನ್ನು ಪೋಸ್ಟ್ ಮಾಡಿತ್ತು. ಈ ಚಿತ್ರವನ್ನು ಹಾಕಿದ 24 ಗಂಟೆಯ ಬಳಿಕ ಈ ಪ್ರಕರಣ ದಾಖಲಾಗಿದೆ.

ಇತ್ತೀಚೆಗೆ ಬಿಡುಗಡೆಯಾಗಿ ಸದ್ದು ಮಾಡುತ್ತಿರುವ ಚಿತ್ರನಟ ದುನಿಯಾ ವಿಜಯ್ ಹಾಗೂ ರಾಜ್ ಬಿ. ಶೆಟ್ಟಿ ಅಭಿನಯದ ಲ್ಯಾಂಡ್ ಲಾರ್ಡ್ ಚಿತ್ರವನ್ನು ಸ್ಪೂರ್ತಿಯಾಗಿಟ್ಟುಕೊಂಡು ಬಿಜೆಪಿ ಕಾಂಗ್ರೇಸ್ ನಾಯಕರ ಚಿತ್ರವನ್ನು ಪೋಸ್ಟ್ ಮಾಡಿದೆ. ಚಿತ್ರದಲ್ಲಿ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಹಾಗೂ ಅವರ ಸಂಪುಟದ ಸಚಿವರು, ಮಾಜಿ ಸಚಿವರುಗಳ ಚಿತ್ರ ಇದ್ದು, ‘ಸ್ಕ್ಯಾಮ್ ಲಾರ್ಡ್. ಇದು ಹಗರಣಗಳ ಕಥೆ ಅಲ್ಲ, ಹಗರಣಗಳನ್ನು ಮಾಡಿದವರ ಕಥೆ’ ಎಂದು ಶೀರ್ಷಿಕೆ ನೀಡಲಾಗಿದೆ. ಅಲ್ಲದೆ, “ಇದು ಕರ್ನಾಟಕವನ್ನು ಹಗಲಿರುಳು ಲೂಟಿ ಹೊಡೆಯುತ್ತಿರುವ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಸ್ಕ್ಯಾಮ್ ಸಾಮ್ರಾಜ್ಯದ ಅಸಲಿ ಕತೆ,” ಎಂದು ಬರೆಯಲಾಗಿದೆ.

ಈ ಸಂಬoಧ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ)ಯನ್ನು ಪ್ರತಿನಿಧಿಸುವ ವಕೀಲರ ತಂಡ ಬೆಂಗಳೂರಿನ ಸೈಬರ್ ಕ್ರೈಮ್ ಪೊಲೀಸ್ ಠಾಣೆಗೆ ದೂರು ನೀಡಿದೆ. ದೂರಿನಲ್ಲಿ ನಾಯಕರ ತೇಜೋವಧೆ ಮಾಡಲಾಗುತ್ತಿದ್ದು, ಸಮಾಜದಲ್ಲಿ ಗೊಂದಲ ಸೃಷ್ಟಿಸಲು ಯತ್ನಿಸಲಾಗುತ್ತಿದೆ ಎಂದು ದೂರಲಾಗಿದೆ. ದೂರನ್ನು ಸ್ವೀಕರಿಸಿರುವ ಪೊಲೀಸರು, ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.