ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಉಳುವಿಯಲ್ಲಿ ಫೆ.3 ರಂದು ಶ್ರೀ ಚನ್ನಬಸವೇಶ್ವರ ದೇವಸ್ಥಾನದ ಮಹಾರಥೋತ್ಸವವು ನಡೆಯಲಿರುವ ಹಿನ್ನೆಲೆಯಲ್ಲಿ ಮದ್ಯ ನಿಷೇಧಿಸಿ ಉತ್ತರಕನ್ನಡ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಆದೇಶಿಸಿದ್ದಾರೆ.
ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತೆ ಕ್ರಮ ವಹಿಸುವ ಸಲುವಾಗಿ ಹಾಗೂ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಫೆ.2 ರ ಬೆಳಗ್ಗೆ 6 ಗಂಟೆಯಿಂದ ಫೆ.4 ರ ಬೆಳಿಗ್ಗೆ 6 ಗಂಟೆಯವರೆಗೆ ಜೋಯಿಡಾ ತಾಲೂಕಿನಾದ್ಯಂತ ಎಲ್ಲಾ ಮದ್ಯದಂಗಡಿ, ವೈನ್ ಶಾಪ್ ಬಂದ್ ಮಾಡುವಂತೆ ಹಾಗೂ ಮದ್ಯ ಸಾಗಾಟ ಹಾಗೂ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
