Karwar| ಸರ್ವೇ ಕಾರ್ಯಕ್ಕೆ ವೈಜ್ಞಾನಿಕ ಉಪಕರಣಗಳನ್ನು ಅಳವಡಿಸಿಕೊಂಡ ವಿಮಾನಗಳು ಜಿಲ್ಲೆಯ ಕೆಲ‌ ಭಾಗಗಳಲ್ಲಿ ಕೆಳಹಂತದಲ್ಲಿ ಹಾರಾಟ ನಡೆಸುತ್ತಿದ್ದು, ಸಾರ್ವಜನಿಕರು ಆತಂಕ ಪಡುವ ಅಗತ್ಯ ವಿಲ್ಲ ಎಂದು ಉತ್ತರಕನ್ನಡ ಜಿಲ್ಲಾಡಳಿತ ತಿಳಿಸಿದೆ.

ಜಿಲ್ಲೆಯ ಹಲವು ಭಾಗಗಳಲ್ಲಿ ವಿಮಾನಗಳು ಕೆಳಹಂತದಲ್ಲಿ ಹಾರಾಟ ನಡೆಸುತ್ತಿದ್ದು, ಇದರಿಂದ ಸಾರ್ವಜನಿಕರಲ್ಲಿ ಕುತೂಹಲ ಹಾಗೂ ಆತಂಕಗಳು ವ್ಯಕ್ತವಾಗುತ್ತಿರುವ ಹಿನ್ನೆಲೆ ಜಿಲ್ಲಾಡಳಿತ ಸ್ಪಷ್ಟನೆ ನೀಡಿದ್ದು, ಬೆಂಗಳೂರಿನ ಭಾರತೀಯ ಭೂವೈಜ್ಞಾನಿಕ ಸರ್ವೆಕ್ಷಣಾ ಸಂಸ್ಥೆ National Aero geophysical Mapping Programme (NAGMP) ಭಾಗವಾಗಿ NAGMP Block-7 ಸರ್ವೇಕ್ಷಣಾ ಕಾರ್ಯವನ್ನು ಮಹಾರಾಷ್ಟ್ರ, ಗೋವಾ ಹಾಗೂ ಕರ್ನಾಟಕ ರಾಜ್ಯದಲ್ಲಿ ಕೈಗೊಂಡಿದೆ. ಹೀಗಾಗಿ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಸದರಿ ಸರ್ವೇ ಕಾರ್ಯಕ್ಕೆ ವೈಜ್ಞಾನಿಕ ಉಪಕರಣಗಳನ್ನು ಅಳವಡಿಸಿಕೊಂಡ ವಿಮಾನಗಳು ಕೆಳಹಂತದಲ್ಲಿ ಹಾರಾಟ ನಡೆಸುತ್ತಿದೆ. ಈ ಸರ್ವೆಯಿಂದ ಪಡೆದ ಮಾಹಿತಿಯನ್ನು ಖನಿಜಾನ್ವೇಷಣೆಯಲ್ಲಿ ತೊಡಗಿರುವ ಸರ್ಕಾರಿ, ಖಾಸಗಿ ಸಂಸ್ಥೆಗಳು ಹಾಗೂ ಸಾರ್ವಜನಿಕರಿಗೆ ಲಭ್ಯವಾಗುವಂತೆ National Geoscience Data Repository (NGDR) ಅಳವಡಿಸಿಕೊಳ್ಳುತ್ತಾರೆ.

ಆದ್ದರಿಂದ, ಸದರಿ ವೈಜ್ಞಾನಿಕ ಸರ್ವೇ ಕಾರ್ಯದಲ್ಲಿ ನಿರಂತವಾಗಿರುವ ಕೆಳ ಹಂತದ ವಿಮಾನ ಹಾರಾಟದ ಕುರಿತು ಸಾರ್ವಜನಿಕರು ಯಾವುದೇ ಆತಂಕಕ್ಕೆ ಒಳಗಾಗಬಾರದೆಂದು ಜಿಲ್ಲಾಡಳಿತ ತಿಳಿಸಿದೆ.