Ankola| ಆರೋಗ್ಯ ಸಚಿವ ಯು.ಟಿ. ಖಾದರ್ ಅವರ ಬೆಂಗಾವಲು ವಾಹನ ಸ್ಕೂಟಿಗೆ ಗುದ್ದಿದ ಪರಿಣಾಮ, ಸ್ಕೂಟಿ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಬಾಳೆಗುಳಿ ಬಳಿ ರಾಷ್ಟ್ರೀಯ ಹೆದ್ದಾರಿ-66 ರ ಬಳಿಯ ವರದರಾಜ್ ಹೋಟೆಲ್ ಸಮೀಪ ಶನಿವಾರ ನಡೆದಿದೆ.

ಅಪಘಾತದಲ್ಲಿ ಸ್ಕೂಟಿ ಸವಾರ ಸಂದೀಪ್ ನಾಯಕ ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ
ಕಾರವಾರದಲ್ಲಿ ಬೆಳಗ್ಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪ್ರಕೃತಿ ವಿಕೋಪಕ್ಕೆ ಸಂಬಂಧಿಸಿದಂತೆ ಸಚಿವ ಖಾದರ್, ಅಧಿಕಾರಿಗಳ ಸಭೆ ನಡೆಸಿ ಮಧ್ಯಾಹ್ನ ಉಡುಪಿ ಕಡೆಗೆ ತೆರಳುವಾಗ ಈ ಘಟನೆ ಸಂಭವಿಸಿದೆ. ಆರೋಗ್ಯ ಸಚಿವರಿದ್ದ ವಾಹನಕ್ಕೆ ಎಸ್ಕಾರ್ಟ್ ಮಾಡಿಕೊಂಡು ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.
ಘಟನೆ ನಡೆದ ತಕ್ಷಣ ಸಚಿವ ಯು.ಟಿ. ಖಾದರ್ ಅವರು ತಮ್ಮ ನಿಲ್ಲಿಸಿ ಗಾಯಾಳುವಿನ ಆರೋಗ್ಯ ವಿಚಾರಿಸಿ, ಅವರನ್ನು ತಕ್ಷಣ ಅಂಕೋಲಾದ ಖಾಸಗಿ ಆಸ್ಪತ್ರೆ ಆರ್ಯ ಮೆಡಿಕಲ್ ಗೆ ದಾಖಲಿಸಿ ಚಿಕಿತ್ಸೆ ದೊರಕುವಂತೆ ವ್ಯವಸ್ಥೆ ಮಾಡಿದರು. ಗಾಯಾಳುವಿಗೆ ಅಂಕೋಲಾದ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಅಂಕೋಲಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
