ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪಿ.ಎಸ್.ಐ ಆಗಿ ಸೇವೆ ಸಲ್ಲಿಸುತ್ತಿದ್ದ ಯಲ್ಲಾಲಿಂಗ ಕುನ್ನೂರ (33) ಅವರು ಇಂದು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಅವರು ಕಳೆದ ಕೆಲವು ದಿನಗಳಿಂದ ಕಾಮಾಲೆ ಮತ್ತು ಯಕೃತ್ತಿನ ಸಮಸ್ಯೆಯಿಂದ ಬಳಲುತ್ತಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದ ಅವರು ಇಂದು ಮಂಗಳವಾರ‌ ನಿಧನರಾದರು.

ಮೂಲತಃ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲ್ಲೂಕಿನವರಾದ ಯಲ್ಲಾಲಿಂಗ ಅವರು ಅತ್ಯಂತ ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿ ಎಂದು ಹೆಸರುವಾಸಿಯಾಗಿದ್ದರು. ಜನಸ್ನೇಹಿ ಅಧಿಕಾರಿಯಾಗಿ ಅವರು ಗುರುತಿಸಿಕೊಂಡಿದ್ದರು. ಮೃತರು ಪುತ್ರಿ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ