Bhatkal| ಹಿಂದುಗಳ ಧಾರ್ಮಿಕ ನಂಬಿಕೆಯ ದೇವರ ಹೊರೆ ಇಳಿಸುತ್ತಿದ್ದ ಮುರಿನಕಟ್ಟೆ ಧ್ವಂಸಗೊಳಿಸಿದನ್ನು ಖಂಡಿಸಿ, ಭಟ್ಕಳದಲ್ಲಿ‌ ಹಿಂದು ಸಂಘಟನೆಗಳು‌ ಹಾಗೂ ಬಿಜೆಪಿ‌ ತೀವ್ರ ಪ್ರತಿಭಟನೆಗೆ ಮುಂದಾಗಿದ್ದು, ಭಟ್ಕಳದಲ್ಲಿ ಕ್ಷಣಕ್ಷಣಕ್ಕೂ ಉದ್ವಿಗ್ನ ವಾತಾವರಣ ಹೆಚ್ಚುತ್ತಿದ್ದು, ಶಾಂತಿ‌ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಇಂದಿನಿಂದ ಮೇ.27 ರವರೆಗೆ ಮೂರು ದಿನಗಳ ಕಾಲ ನಿಷೇಧಾಜ್ಞೆಗೊಳಿಸಲಾಗಿದೆ.

ಈ ಬಗ್ಗೆ ಭಟ್ಕಳ ಉಪದಂಡಾಧಿಕಾರಿಗಳೂ ಆದ ಉಪವಿಭಾಗಾಧಿಕಾರಿ ಆದೇಶ ಮಾಡಿ, ಭಟ್ಕಳ ಪುರಸಭೆ ಮತ್ತು ಜಾಲಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಸಾರ್ವಜನಿಕ ಶಾಂತಿ, ಭದ್ರತೆ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಹಿತ ದೃಷ್ಟಿಯಿಂದ ಮೇ.25 ರಂದು ಬೆಳಿಗ್ಗೆ 6 ಗಂಟೆಯಿಂದ ಮೇ. 27 ರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ. ಐದು ಅಥವಾ ಅದಕ್ಕಿಂದ ಹೆಚ್ಚು ಜನರು ಗುಂಪುಗೂಡುವುದನ್ನು ನಿಷೇಧಿಸಲಾಗಿದ್ದು, ಈ ಆದೇಶವನ್ನು ಉಲ್ಲಂಘಿಸಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡಿದಲ್ಲಿ ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಂಡು ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಸಿದ್ದಾರೆ.