ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಕಾರಿನ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಳಲಗಾವ್ ಬಳಿ ನಡೆದಿದೆ.

ಮೃತ ವ್ಯಕ್ತಿಯನ್ನು ಕುಂದಾಪುರ ಮೂಲದ ಮುಕೇಶ್ ಶಟ್ಟಿ ಎಂದು ತಿಳಿದುಬಂದಿದೆ. ಅಪಘಾತದಲ್ಲಿ ಬಸ್‌ನಲ್ಲಿದ್ದ ಕೆಲ ಪ್ರಯಾಣಿಕರಿಗೆ ಚಿಕ್ಕಪುಟ್ಟ ಗಾಯಗಳಾಗಿದ್ದು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾರಿನಲ್ಲಿದ್ದವರು ಸಿದ್ದಾಪುರದಿಂದ ಬೆಳಗಾವಿಗೆ ಮದುವೆ ಸಂಬಂಧ ಒಪ್ಪಂದದ ಹಿನ್ನೆಲೆಯಲ್ಲಿ ಹೊರಟಿದ್ದರು ಎಂದು ತಿಳಿದುಬಂದಿದೆ.

ಕೆ.ಎಸ್.ಆರ್.ಟಿ.ಸಿ ಬಸ್  ಯಲ್ಲಾಪುರ ಕಡೆಯಿಂದ ಶಿರಸಿ ಮಾರ್ಗವಾಗಿ ಬರುತ್ತಿದ ಕಾರಿನ ನಡುವೆ ಈ ದುರ್ಘಟನೆ ಸಂಭವಿಸಿದೆ. ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಪಿ.ಎಸ್.ಐ ಸಿದ್ದಪ್ಪ ಗುಡಿ ಹಾಗೂ ಪೊಲೀಸ್ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸಂಬಂಧ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.