Karwar| ಕಾರವಾರ ಉಪ ವಿಭಾಗ ವ್ಯಾಪ್ತಿಯಲ್ಲಿ ಹೆಚ್.ಟಿ ವಾಹಕ ಬದಲಾವಣೆ ಕಾಮಗಾರಿ ಇರುವುದರಿಂದ ಮೇ 12 ರಂದು ಬೆಳಗ್ಗೆ 9.30 ಗಂಟೆಯಿಂದ ಸಂಜೆ 6 ಗಂಟೆಯವರೆಗೂ ಕಾರವಾರ ಟೌನ್ ಫೀಡರಿನ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಇನ್ನು ಮೇ 13 ರಂದು ಬೆಳಗ್ಗೆ 9.30 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ನಂದನಗದ್ದಾ, ತೆಲಂಗರೋಡ, ಕೆ.ಎಚ್.ಬಿ, ಸುಂಕೇರಿ ಫೀಡರಿನ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಗ್ರಾಹಕರು ಸಹಕರಿಸುವಂತೆ ಕಾರವಾರ ಹೆಸ್ಕಾಂ, ಕಾರ್ಯ ಮತ್ತು ಪಾಲನಾ ಉಪ ವಿಭಾಗದ ಸಹಾಯಕ ಇಂಜಿನೀಯರ್(ವಿ)ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
