ಕಾರವಾರ: ಜಂಗಲ್ ಕಟಿಂಗ್ ಹಾಗೂ ಲೈನ್ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಕಾರವಾರ ಉಪ ವಿಭಾಗ ವ್ಯಾಪ್ತಿಯ ಹಲವು ಪ್ರದೇಶಗಳಲ್ಲಿ ಜೂನ್ 10ರಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಕಾರವಾರ ನಗರ, ಎನ್ಎಚ್-17, ಕೋಡಿಭಾಗ, ಹಬ್ಬುವಾಡ, ಕೆ.ಎಚ್.ಬಿ, ಅಮದಳ್ಳಿ ಹಾಗೂ ಬಿಣಗಾ ಫೀಡರ್ ವ್ಯಾಪ್ತಿಯ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳ್ಳಲಿದೆ ಎಂದು ಹೆಸ್ಕಾಂ ಕಾರವಾರ ಕಾರ್ಯ ಮತ್ತು ಪಾಲನಾ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (ವಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
