Karwar| ರಾಜ್ಯದ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ಮಂಗಳವಾರ ಏ. 28ಕ್ಕೆ ಕಾರವಾರಕ್ಕೆ ಭೇಟಿ ನೀಡಲಿದ್ದಾರೆ.

ಬೆಳಿಗ್ಗೆ 9.15ಕ್ಕೆ ಬೆಂಗಳೂರಿನಿಂದ ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ VT-HKB ಹೆಲಿಕಾಪ್ಟರ್ ಮೂಲಕ ಹೊರಟು ಕಾರವಾರದ ಮಾಲಾದೇವಿ ಮೈದಾನಕ್ಕೆ ಆಗಮಿಸಲಿದ್ದಾರೆ. ನಂತರ ಬೆಳಿಗ್ಗೆ 11ಕ್ಕೆ ಕಾರವಾರದ ಕಾಂಗ್ರೆಸ್ ಸಮಿತಿ ಕಚೇರಿಗೆ ಭೇಟಿ ನೀಡಿ ಪಕ್ಷದ ಕಾರ್ಯಕರ್ತರೊಂದಿಗೆ ಸಭೆ ನಡೆಸಲಿದ್ದಾರೆ. ಬಳಿಕ 11.45ಕ್ಕೆ ಕಾರವಾರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಇಂಧನ ಇಲಾಖೆಗೆ ಸಂಬಂಧಪಟ್ಟ ವಿಷಯಗಳಿಗೆ ಸಂಬಂಧಿಸಿದಂತೆ ಚರ್ಚಿಸಲು ಜಿಲ್ಲೆಯ ಎಲ್ಲಾ ಚುನಾಯಿತ ಜನ ಪ್ರತಿನಿಧಿಗಳೊಂದಿಗೆ ಸಭೆ ನಡೆಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
