Karwar| ರಾಜ್ಯದ ಕರಾವಳಿ ಭಾಗಗಳಲ್ಲಿ ಏಪ್ರಿಲ್ 25ರಿಂದ ಮೇ 1ರವರೆಗೆ ಕೆಲವೆಡೆ ಗುಡುಗು-ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು Karnataka State Natural Disaster Monitoring Centre (KSNDMC) ಎಚ್ಚರಿಕೆ ನೀಡಿದೆ.

ಈ ಅವಧಿಯಲ್ಲಿ ಮಳೆಗಾಲದ ಪೂರ್ವಭಾವಿಯಾಗಿ ವಾತಾವರಣ ಅಸ್ಥಿರವಾಗಿರುವ ಹಿನ್ನೆಲೆಯಲ್ಲಿ ಗುಡುಗು, ಮಿಂಚು ಹಾಗೂ ಜೋರಾದ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ. ವಿಶೇಷವಾಗಿ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಕರಾವಳಿಯ ಕೆಲವೊಂದು ಪ್ರದೇಶಗಳಲ್ಲಿ ಮಳೆ ಬೀಳುವ ಸಾಧ್ಯತೆ ಹೆಚ್ಚಿದೆ.

ಜನರು ಮಿಂಚಿನ ಸಮಯದಲ್ಲಿ ತೆರವಾದ ಪ್ರದೇಶಗಳಲ್ಲಿ ನಿಲ್ಲದೇ ಸುರಕ್ಷಿತ ಸ್ಥಳಗಳಿಗೆ ಆಶ್ರಯ ಪಡೆಯಬೇಕು. ಕೃಷಿ ಕಾರ್ಯಗಳಲ್ಲಿ ತೊಡಗಿರುವ ರೈತರು ಹಾಗೂ ಮೀನುಗಾರರು ಹವಾಮಾನ ಮಾಹಿತಿ ಗಮನದಲ್ಲಿಟ್ಟುಕೊಂಡು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ.
ಸ್ಥಳೀಯ ಆಡಳಿತವು ಸಹ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸಿದ್ಧವಾಗಿದ್ದು, ಸಾರ್ವಜನಿಕರು ಅಧಿಕೃತ ಹವಾಮಾನ ಮಾಹಿತಿ ಹಾಗೂ ಎಚ್ಚರಿಕೆಗಳನ್ನು ಪಾಲಿಸುವಂತೆ ಮನವಿ ಮಾಡಲಾಗಿದೆ.