Karwar| ಮುಂದಿನ ಮೂರು ಗಂಟೆಗಳಲ್ಲಿ ಉತ್ತರ ಕನ್ನಡ ಜಿಲ್ಲೆಯ ಹಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಭಾರತೀಯ ಹವಮಾನ ಇಲಾಖೆ ನೀಡಿದೆ.
ಉತ್ತರ ಕನ್ನಡ ಸೇರಿದಂತೆ ಮೈಸೂರು ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಬುಧವಾರ ಸಂಜೆ 5.25ರಿಂದ ರಾತ್ರಿ 8.25ರವರೆಗೆ ಕಡಿಮೆ ತೀವ್ರತೆಯ ಗುಡುಗು-ಮಿಂಚಿನ ಸಾಧ್ಯತೆ ಇದೆ ಎಂದು ಎಚ್ಚರಿಕೆ ಸಂದೇಶದಲ್ಲಿ ತಿಳಿಸಲಾಗಿದೆ. ವಿಶೇಷವಾಗಿ ಉತ್ತರ ಕನ್ನಡ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಮಳೆ, ಗುಡುಗು ಹಾಗೂ ಮಿಂಚಿನ ಪ್ರಭಾವ ಕಾಣಿಸಿಕೊಳ್ಳುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಮಳೆಯ ಸಮಯದಲ್ಲಿ ಮರಗಳ ಕೆಳಗೆ ನಿಲ್ಲದೇ, ತೆರವಾದ ಪ್ರದೇಶಗಳಲ್ಲಿ ಸಂಚರಿಸುವುದನ್ನು ತಪ್ಪಿಸಿ ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯುವಂತೆ ಹವಾಮಾನ ಇಲಾಖೆ ಸಲಹೆ ನೀಡಿದೆ.
