Karwar| ಉತ್ತರಕನ್ನಡ ಜಿಲ್ಲೆಯ ಹಲವು ಭಾಗಗಳಲ್ಲಿ ಮುಂದಿನ ಮೂರು ಗಂಟೆಗಳಲ್ಲಿ ಗುಡುಗು ಮಿಂಚಿನ ಸಹಿತ ಮಳೆ ಸಾಧ್ಯತೆ ಇದೆ.
ಈ ಬಗ್ಗೆ ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಕೇಂದ್ರದಿಂದ ಉತ್ತರಕನ್ನಡ ಸೇರಿದಂತೆ ಎಂಟು ಜಿಲ್ಲೆಗಳಿಗೆ ಗುಡುಗು-ಮಿಂಚು ಸಹಿತ ಮಳೆಯ ಎಚ್ಚರಿಕೆ ನೀಡಲಾಗಿದೆ.
ಉತ್ತರಕನ್ನಡ ಸೇರಿದಂತೆ ಕೊಡಗು, ಕೊಪ್ಪಳ, ಮಂಡ್ಯ, ಮೈಸೂರು, ಉಡುಪಿ, ವಿಜಯಪುರ ಹಾಗೂ ವಿಜಯನಗರ ಜಿಲ್ಲೆಗಳಿಗೆ ಮುನ್ನೆಚ್ಚರಿಕೆ ನೀಡಲಾಗಿದೆ.
ಈ ಭಾಗಗಳಲ್ಲಿ ಕಡಿಮೆ ತೀವ್ರತೆಯ ಮಳೆಯಾಗುವ ಸಾಧ್ಯತೆ ಇದ್ದರೂ, ಕೆಲವಡೆ ಗುಡುಗು-ಮಿಂಚು ಕಾಣಿಸಿಕೊಳ್ಳುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.
ಜನರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ವಿಶೇಷವಾಗಿ ತೆರೆದ ಪ್ರದೇಶಗಳಲ್ಲಿ ನಿಲ್ಲುವುದು, ಮರಗಳ ಕೆಳಗೆ ಆಶ್ರಯ ಪಡೆಯುವುದು ತಪ್ಪಿಸುವಂತೆ ಮುನ್ಸೂಚನೆಯಲ್ಲಿ ತಿಳಿಸಲಾಗಿದೆ.
