ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಜುಲೈ 6ರಿಂದ 8ರವರೆಗೆ 40ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

ಕರಾವಳಿ ಮತ್ತು ಸುತ್ತಮುತ್ತಲಿನ ಕೆಲವು ಪ್ರದೇಶಗಳಲ್ಲಿ ಅತ್ಯಧಿಕ ಮಳೆ (204.5 ಮಿ.ಮೀ.ಗಿಂತ ಹೆಚ್ಚು) ದಾಖಲಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ, ನದಿ, ಸಮುದ್ರ ಹಾಗೂ ತಗ್ಗು ಪ್ರದೇಶಗಳ ಬಳಿ ಅನಗತ್ಯವಾಗಿ ಸಂಚರಿಸದಂತೆ ಹಾಗೂ ಜಿಲ್ಲಾಡಳಿತದಿಂದ ನೀಡಲಾಗುವ ಸೂಚನೆಗಳನ್ನು ಪಾಲಿಸುವಂತೆ ಮನವಿ ಮಾಡಲಾಗಿದೆ.