Sirsi| ನಗರದ ಸಿಂಪಿಗಲ್ಲಿಯಲ್ಲಿ ರಾತ್ರಿ ವೇಳೆ ಕೆಲ ಯುವಕರ ಮೇಲೆ ಮಾರಕಾಸ್ತ್ರಗಳಿಂದ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆಗೆ ಉತ್ತರ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಪ್ರೇಮಕುಮಾರ್ ನಾಯ್ಕ್ ವಿಷಾದ ವ್ಯಕ್ತಪಡಿಸಿದರು.

ಘಟನೆಯ ಕುರಿತು ಹಾಗೂ ಆರಕ್ಷಕರು ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳುವ ಉದ್ದೇಶದಿಂದ ಅವರು ಶಿರಸಿ ನಗರ ಪೊಲೀಸ್ ಠಾಣೆಗೆ ಭೇಟಿ ನೀಡಿ, ವೃತ್ತ ನಿರೀಕ್ಷಕ ಸಂಪತ್ ಕುಮಾರ್ ಅವರೊಂದಿಗೆ ಚರ್ಚೆ ನಡೆಸಿದರು. ಪ್ರಕರಣದ ತನಿಖೆ ಮತ್ತು ಆರೋಪಿಗಳ ವಿರುದ್ಧ ಕೈಗೊಳ್ಳಲಾಗುತ್ತಿರುವ ಕ್ರಮಗಳ ಬಗ್ಗೆ ಮಾಹಿತಿ ಪಡೆದ ಅವರು, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿದರು.

ಈ ವೇಳೆ ಪ್ರತಿಕ್ರಿಯಿಸಿದ ವೃತ್ತ ನಿರೀಕ್ಷಕ ಸಂಪತ್ ಕುಮಾರ್, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು. ತನಿಖೆಯ ಪ್ರಗತಿ ಹಾಗೂ ಪೊಲೀಸರು ಕೈಗೊಂಡಿರುವ ಕ್ರಮಗಳ ಕುರಿತು ವಿವರ ನೀಡಿದರು.

ಬಳಿಕ ಮಾತನಾಡಿದ ಪ್ರೇಮಕುಮಾರ್ ನಾಯ್ಕ್, ಸಮಾಜದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಯುವಕರು ಎಚ್ಚರಿಕೆಯಿಂದ ಇರಬೇಕು ಜೊತೆಗೆ, ಪ್ರತಿಯೊಬ್ಬ ಹಿಂದೂ ಯುವಕರ ಜೊತೆ ನಾವು ಸದಾ ಇದ್ದೇವೆ ಎಂದರು.

ಈ ಸಂದರ್ಭದಲ್ಲಿ ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಚಾಲಕ ಹರೀಶ ಕರ್ಕಿ, ಪ್ರಶಾಂತ್ ನಾಯ್ಕ್ ಗುಡ್ನಾಪುರ, ಸತೀಶ್ ನಾಯ್ಕ್, ಸಂಜಯ್ ಸಜ್ಜನ, ಅಮಿತ್ ಸರ್ವದೆ, ಸಚಿನ್ ಶೇಟ್ ಸೇರಿದಂತೆ ಹಲವರು ಉಪಸ್ಥಿತರಿದ್ದರು