ನವದೆಹಲಿ: ಮುಂಬರುವ ಕರ್ನಾಟಕ ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆ ಭಾರತೀಯ ಜನತಾ ಪಾರ್ಟಿಯು ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು,

ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಮಂಗಳವಾರ ಪ್ರಕಟಿಸಿದ ಪಟ್ಟಿಯಲ್ಲಿ ರಾಜ್ಯದ ಮೂರು ಪ್ರಮುಖ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ.

ಈಶಾನ್ಯ ಶಿಕ್ಷಕರ ಕ್ಷೇತ್ರಕ್ಕೆ ಶಶೀಲ್ ಜಿ. ನಮೋಶಿ, ಪಶ್ಚಿಮ ಪದವೀಧರರ ಕ್ಷೇತ್ರಕ್ಕೆ ಎಸ್.ವಿ. ಸಂಕನೂರು ಹಾಗೂ ಆಗ್ನೇಯ ಪದವೀಧರರ ಕ್ಷೇತ್ರಕ್ಕೆ ಕೆ.ಎಂ. ಸುರೇಶ್ ಅವರನ್ನು ಅಭ್ಯರ್ಥಿಗಳಾಗಿ ಘೋಷಿಸಲಾಗಿದೆ.

ಈ ಕುರಿತು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ ಸಿಂಗ್ ಅಧಿಕೃತ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ.