ಕಾರವಾರ, ಜು. 6: ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಗಾಳಿ-ಮಳೆಯ ಹಿನ್ನೆಲೆ ಹಾಗೂ ಹವಾಮಾನ ಇಲಾಖೆಯು ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಿರುವ ಕಾರಣ, ಜಿಲ್ಲೆಯ ಐದು ತಾಲೂಕಿನ ಶಾಲೆಗಳಿಗೆ ನಾಳೆ ರಜೆ ಘೋಷಿಸಲಾಗಿದೆ.

ಶಿರಸಿ, ಸಿದ್ದಾಪುರ, ಜೋಯಿಡಾ, ದಾಂಡೇಲಿ ಹಾಗೂ ಯಲ್ಲಾಪುರ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ನಾಳೆ ರಜೆ ನೀಡಿ ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯಾ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯಲ್ಲಿ ಮುಂದುವರಿದಿರುವ ಭಾರೀ ಮಳೆ ಹಾಗೂ ಸಾರ್ವಜನಿಕರ, ವಿಶೇಷವಾಗಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ.

ಪೋಷಕರು ಹಾಗೂ ಸಾರ್ವಜನಿಕರು ಅಗತ್ಯವಿಲ್ಲದಿದ್ದರೆ ಹೊರಗಡೆ ಸಂಚರಿಸುವುದನ್ನು ತಪ್ಪಿಸಿ, ಜಿಲ್ಲಾಡಳಿತದ ಸೂಚನೆಗಳನ್ನು ಪಾಲಿಸುವಂತೆ ಮನವಿ ಮಾಡಲಾಗಿದೆ.