ಕಾರವಾರ ತಾಲೂಕಿನ ಮಾಜಾಳಿಯ ಲಿಂಗುಸಾವಂತವಾಡದ ಶ್ರೀ ವಿಠ್ಠಲ ರುಕ್ಮಾಯಿ ದೇವರ ಜಾತ್ರಾ ಮಹೋತ್ಸವ ಫೆ. 6 ಶುಕ್ರವಾರ ರಂದು ನಡೆಯಲಿದೆ.
ಅಂದು ಬೆಳಗ್ಗೆ ಭಕ್ತರಿಂದ ವಿವಿಧ ಪೂಜಾ ಕೈಂಕರ್ಯಗಳು ನಡೆಯಲಿದ್ದು, ಭಕ್ತರು ಹಣ್ಣು ಕಾಯಿ ಸೇವೆ ಸೇರಿದಂತೆ ವಿವಿಧ ಹರಕೆಗಳನ್ನು ಸಲ್ಲಿಸಬಹುದಾಗಿದೆ. ಹೋಮ ಹವನಾದಿಗಳು ಸೇರಿದಂತೆ ಮಹಾ ಪೂಜೆ ನಡೆಯಲಿದೆ.
ಮಧ್ಯಾಹ್ನ ಅನ್ನ ಸಂತರ್ಪಣೆ, ಪಲ್ಲಕ್ಕಿ ಉತ್ಸವ, ವಿವಿಧ ಧಾರ್ಮಿಕ ವಿಧಿವಿಧಾನಗಳು ನಡೆಯಲಿದೆ. ರಾತ್ರಿ ಭಜನೆ, ಮಹಾ ಪೂಜೆ ತೀರ್ಥ ಪ್ರಸಾದ ವಿತರಣೆ ನಡೆಯಲಿದ್ದು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ದೇವಸ್ಥಾನ ಆಡಳಿತ ಮಂಡಳಿ ವಿನಂತಿಸಿದೆ.
