ಕಾರವಾರ: ಕಡಲತೀರವನ್ನು ಸ್ವಚ್ಚಗೊಳಿಸುವ ಹಾಗೂ ಮಾನವ ಸರಪಳಿ ಮೂಲಕ ಮತದಾರರ ಪಟ್ಟಿ ಪರಿಷ್ಕರಣೆ ಜಾಗೃತಿ (S.I.R) ಯನ್ನು ಅತ್ಯಂತ ವಿಶಿಷ್ಠಪೂರ್ಣವಾಗಿ ಕಾರವಾರದಲ್ಲಿ ಹಮ್ಮಿಕೊಳ್ಳಲಾಯಿತು.

ಉತ್ತರಕನ್ನಡ ಜಿಲ್ಲಾ ಪಂಚಾಯತ್ ಹಾಗೂ ಸ್ಪೀಪ್ ಸಮಿತಿ ಕಾರ್ಯಕ್ರಮದಡಿ ಕಾರವಾರದ ರವೀಂದ್ರನಾಥ ಟಾಗೋರ್ ಬೀಚ್ನಲ್ಲಿ ಮಾನವ ಸರಪಳಿ ರಚನೆ ಮತ್ತು ಕಡಲತೀರ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಇಂದು ಶನಿವಾರ ಬೆಳಿಗ್ಗೆ ರವೀಂದ್ರನಾಥ ಠಾಗೋರ ಕಡಲತೀರದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಒಟ್ಟುಗೂಡಿ ಮಾನವ ಸರಪಳಿ ರಚಿಸಿ ಮತದಾರರ ಪಟ್ಟಿ ಪರಿಷ್ಕರಣೆ ಬಗ್ಗೆ ಜಾಗೃತಿ ಮೂಡಿಸಲಾಯಿತು. SIR ಎಂಬ ಅಕ್ಷರವನ್ನು ಮಾನವ ಸರಪಳಿಯಲ್ಲಿ ರಚನೆ ಮಾಡಿ, ಆಕರ್ಷಕ ಚಿತ್ತಾರ ಮೂಡಿಸಲಾಯಿತು. ನಂತರ ಕಾರವಾರ ರವೀಂದ್ರನಾಥ ಠಾಗೋರ ಕಡಲತೀರವನ್ನು ಅಧಿಕಾರಿಗಳು, ಸಿಬ್ಬಂದಿಗಳು, ಸ್ವಯಂ ಸೇವಾ ಸಂಸ್ಥೆ ಸದಸ್ಯರು ಹಾಗೂ ಸಾರ್ವಜನಿಕರ ಸಹಕಾರದಲ್ಲಿ ಸ್ವಚ್ಛಗೊಳಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ದಿಲೀಷ್ ಶಶಿ, ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಸೇರಿದಂತೆ ಅಧಿಕಾರಿಗಳು ಇದ್ದರು.
