Subrahmanya| ಇಲ್ಲಿನ ಐನೆಕಿದು ಗ್ರಾಮದ ಖಾಸಗಿ ಜಾಗದ ಪಕ್ಕದ ಕಾಡಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅಸ್ಥಿಪಂಜರವೊಂದು ಮಂಗಳವಾರ ಪತ್ತೆಯಾಗಿದೆ.

ಇದು ಸುಮಾರು ನಾಲ್ಕು ತಿಂಗಳ ಹಿಂದೆ ಕಾಣೆಯಾಗಿದ್ದ ಕಲ್ಮಕಾರು ಗ್ರಾಮದ ಯಶವಂತ ಕಾಜಿಮಡ್ಕ ಎಂಬವರ ಅಸ್ಥಿಪಂಜರ ಎಂದು ಶಂಕಿಸಲಾಗಿದೆ. ಸದ್ಯಕ್ಕೆ ಅಸ್ಥಿಪಂಜರವನ್ನು ವಶಕ್ಕೆ ಪಡೆದಿರುವ ಸುಬ್ರಹ್ಮಣ್ಯ ಪೊಲೀಸರು ತನಿಖೆ ಮುಂದುವರಿಸಿದ್ದು, ಕಾಣೆಯಾದ ವ್ಯಕ್ತಿಯ ಕುಟುಂಬಸ್ಥರ ಡಿಎನ್ಎ ಪರೀಕ್ಷೆ ನಡೆಸಿ ಮೃತ ವ್ಯಕ್ತಿಯ ಗುರುತು ಪತ್ತೆಗೆ ಮುಂದಾಗಿದ್ದಾರೆ.
