ಅಪ್ರಾಪ್ತ ಮಕ್ಕಳು ಶೈಕ್ಷಣಿಕವಾಗಿ ಆಸಕ್ತಿ ಕಳೆದುಕೊಂಡು ಮೊಬೈಲ್ ಬಳಕೆಯಲ್ಲೇ ಹೆಚ್ಚಾಗಿ ಸಮಯ ಕಳೆಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ, ಮಕ್ಕಳ ಹಾಗೂ ಪಾಲಕರ ಹಿತದೃಷ್ಟಿಯಿಂದ ರಾಜ್ಯದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆಗೆ ನಿಷೇಧ ಹೇರಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಣೆ ಮಾಡಿದ್ದಾರೆ.
ಇಂದು ವಿಧಾನಸೌಧದಲ್ಲಿ ತಮ್ಮ ದಾಖಲೆಯ 17 ನೇ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ, ಚಿಕ್ಕ ಮಕ್ಕಳ ಮೊಬೈಲ್ ಬಳಕೆ ನಿಯಂತ್ರಣದ ಐತಿಹಾಸಿಕ ನಿರ್ಣಯವನ್ನು ಕೈಗೊಂಡಿದ್ದಾರೆ.
ಇತ್ತೀಚಿನ ಮಕ್ಕಳು ಮೈದಾನದಲ್ಲಿ ಆಟವಾಡುವ ಬದಲು ಹೆಚ್ಚಿನ ಸಮಯವನ್ನು ಮೊಬೈಲ್ ನಲ್ಲಿ ಆಟವಾಡಲು ವಿನಿಯೋಗಿಸುತ್ತಿದ್ದಾರೆ. ಅತೀಯಾದ ಮೊಬೈಲ್ ಬಳಕೆಯಿಂದ ಮಾನಸಿಕ ಒತ್ತಡ ಸೇರಿದಂತೆ ಅನೇಕ ಕಾಯಿಲೆಗಳಿಗೆ ಚಿಕ್ಕ ಮಕ್ಕಳು ಬಲಿಯಾಗುತ್ತಿರುವ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.
