Mundagod| ಕಳೆದ ಶನಿವಾರ ರಾತ್ರಿ ಪಟ್ಟಣದಲ್ಲಿ ಜಮೀರ್ ಅಹ್ಮದ್ ದರ್ಗಾವಾಲೆ ಹತ್ಯೆಯಾದ ಸ್ಥಳಕ್ಕೆ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನಿನ್ನೆ ಶನಿವಾರ ರಾತ್ರಿ ಹನ್ನೊಂದರ ಸುಮಾರಿಗೆ ಪಟ್ಟಣದ KSRTC ಬಸ್ ನಿಲ್ದಾಣದ ಎದುರಿನ ಅಂಬಿಕಾ ಸಾವಜಿ ಹೊಟೇಲ್ ಗೆ ಸ್ನೇಹಿತನ ಜೊತೆ ಊಟಕ್ಕೆ ತೆರಳಿದ್ದ ರೌಡಿ ಶೀಟರ್ ಜಮೀರ್ ಅಹ್ಮದ್ ದರ್ಗಾವಾಲೆಯನ್ನು ನಾಲ್ಕೈದು ಜನರಿದ್ದ ಹಂತಕರ ತಂಡ ಕಾರದಪುಡಿ ಎರಚಿ ಸಿನಿಮೀಯ ರೀತಿಯಲ್ಲಿ ಮಚ್ಚಿನಿಂದ ಬರ್ಭರವಾಗಿ ಕೊಲೆ ಮಾಡಿ ಪರಾರಿಯಾಗಿದ್ದರು.
ಈ ಹಿನ್ನೆಲೆಯಲ್ಲಿ ಘಟನಾ ಸ್ಥಳಕ್ಕೆ ಎಸ್ಪಿ ದೀಪನ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪೊಲೀಸ್ ಅಧಿಕಾರಿಗಳಿಂದ ಘಟನೆಯ ಬಗ್ಗೆ ಮಾಹಿತಿ ಪಡೆದು ಸೂಕ್ತ ಸೂಚನೆಗಳನ್ನು ನೀಡಿದರು. ಈ ಸಂದರ್ಭದಲ್ಲಿ ಡಿವೈಸ್ಪಿ ಪಾಟೀಲ್ ಹಾಗೂ ಪೋಲಿಸ್ ಅಧಿಕಾರಿಗಳು ಇದ್ದರು.
