Karwar| ತೈಲ ಕಂಪನಿ ಅಧಿಕಾರಿಗಳೊಂದಿಗೆ (IOC, BPC and HPC) ಸಭೆ ನಡೆಸಿ ಗೃಹ ಬಳಕೆಯ ಎಲ್ಪಿಜಿ ಸಿಲಿಂಡರ್ಗಳ ಲಭ್ಯತೆ ಬಗ್ಗೆ ಖಾತ್ರಿಪಡಿಸಿಕೊಳ್ಳಲಾಗಿದ್ದು, ಯಾವುದೇ ಸಮಸ್ಯೆ ಇರುವುದಿಲ್ಲ. ಹೀಗಾಗಿ ಸಾರ್ವಜನಿಕರು ಅನಗತ್ಯ ಆತಂಕಕ್ಕೆ ಒಳಗಾಗದಂತೆ ಉತ್ತರಕನ್ನಡ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಜಿಲ್ಲೆಯಲ್ಲಿ ಪ್ರಸ್ತುತ ಲಭ್ಯವಿರುವ ದೇಶೀಯ ಎಲ್ಪಿಜಿ ದಾಸ್ತಾನು ಗೃಹಬಳಕೆ ಗ್ರಾಹಕರಿಗೆ ಅಗತ್ಯವಿರುವ ಬಗ್ಗೆ ತೈಲ ಕಂಪನಿಗಳು ಮಾಹಿತಿ ನೀಡಿದ್ದು, ಜಿಲ್ಲೆಯ ಎಲ್ಲಾ ಗ್ರಾಹಕರು ಎಲ್ಜಿ ಸರಬರಾಜಿನ ಬಗ್ಗೆ ಯಾವುದೇ ರೀತಿಯ ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ. ಗ್ರಾಹಕರು ಆತಂಕದಲ್ಲಿ ತುರ್ತು ಮತ್ತು ಅನಗತ್ಯ ಬುಕಿಂಗ್ ಮಾಡದೆ, ಮಾರುಕಟ್ಟೆಯಲ್ಲಿ ಕೃತಕ ಬೇಡಿಕೆ ಸೃಷ್ಟಿಯಾಗದಂತೆ ಸಮರ್ಪಕವಾಗಿ ಬಳಕೆ ಮಾಡಲು ಸಮತೋಲನ ಕಾಪಾಡಲು ಅವರು ತಿಳಿಸಿದ್ದಾರೆ.

ಅಗತ್ಯ ಸೇವೆಗಳನ್ನು ಒದಗಿಸುವ ಸಾರ್ವಜನಿಕ ಸಂಸ್ಥೆಗಳಾದ ಸರ್ಕಾರಿ ಆಸ್ಪತ್ರೆಗಳು, ವಿದ್ಯಾರ್ಥಿನಿಲಯಗಳು, ಅಂಗನವಾಡಿ, ಶಾಲೆ, ಕಾಲೇಜು, ಕಾರಾಗೃಹ ಇತ್ಯಾದಿ ಸಂಸ್ಥೆಗಳಿಗೆ ಯಾವುದೇ ಅಡಚಣೆಯಾಗದಂತೆ ಎಲ್ ಪಿಜಿ ಸೌಲಭ್ಯವನ್ನು ಒದಗಿಸುವಂತೆ ತೈಲಕಂಪನಿಗಳಿಗೆ ಈಗಾಗಲೇ ಸೂಚನೆಯನ್ನು ನೀಡಲಾಗಿದೆ.
ಅನಧಿಕೃತವಾಗಿ ಗ್ಯಾಸ್ ಸಿಲಿಂಡರ್ಗಳ ಅಕ್ರಮ ದಾಸ್ತಾನು/ಸಾಗಾಣಿಕೆ/ರಿಫಿಲಿಂಗ್ ಪ್ರಕರಣ ಗಳು ಕಂಡುಬoದಲ್ಲಿ
Essential Commodities Act 1955 and Petroleum Products (Maintenance of Production Storage and Supply) Order 1999 and LPG Control Order 2000 ರಡಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿರುವ ಅವರು, ಈ ಸಂಬಂಧ ಆಯಾ ತಾಲೂಕಿನ ತಹಶೀಲ್ದಾರರವರಿಗೆ ಈ ಬಗ್ಗೆ ಕ್ರಮವಹಿಸಲು ಅಗತ್ಯ ಸೂಚನೆಗಳನ್ನು ನೀಡಲಾಗಿದೆ. ಕಾಳಸಂತೆಕೋರರ ವಿರುದ್ಧ ಕಠಿಣ ಕಾನೂನು ಕ್ರಮಗಳನ್ನು ಜರುಗಿಸಲು ಸಹ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಎಲ್ಪಿಜಿ ಕುರಿತು ಯಾವುದೇ ಸಮಸ್ಯೆಗಳು ಕಂಡುಬಂದಲ್ಲಿ ಜಿಲ್ಲಾಧಿಕಾರಿಗಳ ಕಂಟ್ರೋಲ್ ರೂಮ್ ಸಂಖ್ಯೆ 08382 229857 ಅಥವಾ ಪೊಲೀಸ್ ಕಂಟ್ರೋಲ್ ರೂಮ್ ಸಂಖ್ಯೆ 9480805200 ಗಳನ್ನು ಸಂಪರ್ಕಿಸುವಂತೆ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
