Karwar| ನಗರದ ಹಣ್ಣಿನ ವ್ಯಾಪಾರಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ನಡೆದಿದೆ.

ಮೃತರನ್ನು ನಿಯಾಜ್ ಹುಸೇನ್‌ಸಾಬ್ ನೀಲಂಜಿ ಎಂದು ಗುರುತಿಸಲಾಗಿದೆ. ನಗರದ ಕೋಡಿಬೀರ ದೇವಸ್ಥಾನದ ಸಮೀಪದ ಅವರ ನಿವಾಸದಲ್ಲಿ ಆತ್ಮಹತ್ಯೆ ಗೆ ಶರಣಾಗಿದ್ದಾರೆ.

ನಿಯಾಜ್ ಕಳೆದ ಹಲವು ವರ್ಷಗಳಿಂದ ನಗರದ ನೂತನ ಮೀನು ಮಾರುಕಟ್ಟೆ ಕಟ್ಟಡದ ಮಳಿಗೆಯಲ್ಲಿ ಹಣ್ಣಿನ ವ್ಯಾಪಾರ ನಡೆಸುತ್ತಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ಗೊತ್ತಾಗಿಲ್ಲ.

  ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ನಗರ ಪೊಲೀಸ್ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.