Karwar| 2026 ರ ಆಯವ್ಯಯದಲ್ಲಿ ಕಾರವಾರಕ್ಕೆ ಸೂಪರ್ ಸ್ಪೇಷಲಿಟಿ ಆಸ್ಪತ್ರೆಯನ್ನು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ಕಳೆದ ಫೆ.22 ರಂದು ಕಾರವಾರದಲ್ಲಿ ಮಲ್ಟಿ ಸ್ಪೇಷಲಿಟಿ ಆಸ್ಪತ್ರೆ ಉದ್ಘಾಟನೆ ಆಗಮಿಸಿದ್ದಾಗ ಈ ಬಾರಿಯ ಅಯವ್ಯಯದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಭರವಸೆ ನೀಡಿದ್ದರು.
ನುಡಿದಂತೆ ನಡೆದಿರುವ ಸಿಎಂ ಸಿದ್ದರಾಮಯ್ಯ, ಬಜೆಟ್ ನಲ್ಲಿ ಕಾರವಾರಕ್ಕೆ ₹ 100 ಕೋಟಿ ವೆಚ್ಚದ ಆಸ್ಪತ್ರೆಗೆ ಮಂಜೂರಾತಿ ನೀಡಿದ್ದಾರೆ.
ಜಿಲ್ಲೆಯಲ್ಲಿ ಆರೋಗ್ಯ ಸೌಲಭ್ಯದ ಕುರಿತಾಗಿ ಸಾಕಷ್ಟು ಹೋರಾಟಗಳು ನಡೆದಿದ್ದವು. ಪ್ರತಿ ವರ್ಷದ ಜುನಾವಣೆಯ ಸಂದರ್ಭದಲ್ಲಿ ಗರಿಗೆದರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣದ ಭರವಸೆಯ ಆಯಸ್ಸು ಚುನಾವಣೆ ಮುಗಿಯುವ ವರೆಗೆ ಮಾತ್ರ ಇರುತ್ತಿತ್ತು.
ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕುಮಟಾದ ಮಿರ್ಜಾನ್ ನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕಾಗಿ ಸ್ಥಳ ಪರಿಶೀಲನೆ ನಡೆದಿತ್ತು. ಆದರೆ ಆರ್ಥಿಕ ಇಲಾಖೆ ಅಷ್ಟೋಂದು ಹಣ ನೀಡಲು ಸಾಧ್ಯವಿಲ್ಲ ಎಂದ ಕಾರಣ ಜಿಲ್ಲೆಯ ಜನರ ಬಹು ವರ್ಷದ ಬೇಡಿಕೆ ಕನಸಾಗಿಯೇ ಉಳಿದಿತ್ತು.
ಸೂಪರ್ ಸ್ಪೆಷಲಿಟಿ ಆಸ್ಪತ್ರೆಗೆ ಹಲವು ಸಂಘಟನೆಗಳು ಸೇರಿದಂತೆ ಸಾರ್ವಜನಿಕರು ಸಾಕಷ್ಟು ಹೋರಾಟಗಳನ್ನು ಮಾಡಿದ್ದರು. ಕೊನೆಗೂ ಸರ್ಕಾರ ಜಿಲ್ಲೆಯ ಜನತೆಯ ಬೇಡಿಕೆಯಾದ ಸೂಪರ್ ಸ್ಪೆಷಲಿಟಿ ಆಸ್ಪತ್ರೆಯನ್ನು ಬಜೆಟ್ ನಲ್ಲಿ ಘೋಷಿಸುವ ಬಹು ದಿನಗಳ ಬೇಡಿಕೆ ಈಡೇರಿಸಿದಂತಾಗಿದೆ.
