Ankola| ಇಲ್ಲಿನ ಕಂಚಿನಬಾಗಿಲ ರಾಷ್ಟ್ರೀಯ ಹೆದ್ದಾರಿ ಬಳಿ ನಡೆದಿದ್ದ ಟ್ಯಾಂಕರ್ ಸ್ಫೋಟದಲ್ಲಿ ಗಂಭಿರವಾಗಿ ಗಾಯಗೊಂಡಿದ್ದ ಚಾಲಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ.
ಚಿತ್ರದುರ್ಗದ ದೊಡ್ಡಬ್ಯಾಳದಕೇರಿಯ ಮುರಗೇಂದ್ರಯ್ಯ ತಂದೆ ಮಲ್ಲಿಕಾರ್ಜುನ (33) ಎಂಬಾತನೇ ಸಾವನ್ನಪ್ಪಿದ ದುರ್ದೈವಿ.
ಏ.16 ರ ಸಂಜೆ 4 ರ ಸುಮಾರಿಗೆ ಅಂಕೋಲಾದ ಕಂಚಿನಬಾಗಿಲು ಸಮೀಪ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಎಥೆನಾಲ್ ತುಂಬಿದ ಟ್ಯಾಂಕರ್ (KA48 A-2330) ಸ್ಫೋಟಗೊಂಡು ಭಾರೀ ಅಗ್ನಿ ಅವಘಡ ಸಂಭವಿಸಿತ್ತು. ಸ್ಫೋಟದ ಪರಿಣಾಮ ಟ್ಯಾಂಕರ್ ಸಂಪೂರ್ಣವಾಗಿ ಹೊತ್ತಿ ಉರಿದಿತ್ತು. ಘಟನೆಯಲ್ಲಿ ಗಂಭೀರವಾಗಿ ಸುಟ್ಟು ಗಾಯಗೊಂಡಿದ್ದ ಚಾಲಕನನ್ನು ಅಂಕೋಲಾ ತಾಲೂಕ ಆಸ್ಪತ್ರೆಯಲ್ಲಿ ಕಾರವಾರದ ಜಿಲ್ಲಾ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಕೆ.ಎಸ್.ಹೆಗಡೆ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಂಗಳೂರಿನ ಕೆ.ಎಸ್.ಹೆಗಡೆ ಆಸ್ಪತ್ರೆಯಲ್ಲಿ ಮಂಗಳವಾರ ಮಧ್ಯಾಹ್ನ 3.13 ರ ಸುಮಾರಿಗೆ ಸಾವನ್ನಪ್ಪಿದ್ದಾನೆ.
