Bangalore: ಪ್ರಸ್ತುತ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಫಲಿತಾಂಶ ನಾಳೆ ಮಧ್ಯಾಹ್ನ ಮೂರು ಗಂಟೆಗೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.
ಫೆ. 28ರಿಂದ ಮಾರ್ಚ್ 17ರವರೆಗೆ ನಡೆದಿದ್ದ PUC ಪರೀಕ್ಷೆಯಲ್ಲಿ ರಾಜ್ಯದ ಒಟ್ಟು 7,10,363 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿದ್ದರು. 1,217 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆದಿತ್ತು.
ಈ ಮೊದಲು ಶಿಕ್ಷಣ ಇಲಾಖೆ ಏಪ್ರಿಲ್ 8ರಂದು ಫಲಿತಾಂಶ ಪ್ರಕಟ ಮಾಡುವುದಾಗಿ ಹೇಳಿತ್ತು.
ಆದರೆ ಕಾರಣಾಂತರಗಳಿಂದ ಒಂದು ದಿನ ಮುಂದೂಡಲಾಗಿದ್ದು, ಅಂದರೆ ಏಪ್ರಿಲ್ 9ರಂದು ಮಧ್ಯಾಹ್ನ ಮೂರು ಗಂಟೆಗೆ ಫಲಿತಾಂಶ ಪ್ರಕಟವಾಗಲಿದೆ.
ಮೊದಲು ಆನ್‌ಲೈನ್‌ನಲ್ಲಿ ಫಲಿತಾಂಶ ಪ್ರಕಟವಾಗಲಿದ್ದು, ವಿದ್ಯಾರ್ಥಿಗಳು https://karresults.nic.in ವೆಬ್‌ಸೈಟ್‌ನಲ್ಲಿ ಫಲಿತಾಂಶ ನೋಡಬಹುದಾಗಿದೆ.
ನಾಳೆ ಸಂಜೆ 6:15ಕ್ಕೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. ಪತ್ರಿಕಾಗೋಷ್ಠಿಯ ಬಳಿಕ ವಿದ್ಯಾರ್ಥಿಗಳು ನೊಂದಾಯಿಸಿದ ಮೊಬೈಲ್ ಸಂಖ್ಯೆಗೆ ಫಲಿತಾಂಶದ ಮಾಹಿತಿ ಎಸ್‌ಎಂಎಸ್ ಮೂಲಕ ತಲುಪಲಿದೆ.
ಈ ವರ್ಷ ವಿದ್ಯಾರ್ಥಿಗಳ ಅಂಕಪಟ್ಟಿಯನ್ನು ಡಿಜಿ ಲಾಕರ್ (DigiLocker) ಮೂಲಕ ಪಡೆಯುವ ವ್ಯವಸ್ಥೆಯನ್ನು ಮಾಡಲಾಗಿದೆ.
