Gokarn| ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವನೆ ಮಾಡಿದ ಆರೋಪದ ಮೇಲೆ ಗೋಕರ್ಣ ಪೊಲೀಸರು ಇಬ್ಬರು ಯುವಕರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.

ಬೆಂಗಳೂರಿನ ಓನಿಟಿ ಸೊಲ್ಯೂಷನ್ ಕಂಪನಿಯ ಉದ್ಯೋಗಿ ಎಂ.ಎಸ್. ಪವನ್ (28) ಹಾಗೂ ಟೆಕ್ ಮಹೀಂದ್ರಾ ಕಂಪನಿಯ ರಾಘು ಸೆಲ್ವರಂಗನ್ (30) ಇಬ್ಬರು ಗೋಕರ್ಣದ ರುದ್ರಪಾದದ ಕರಿಯಪ್ಪನ ಕಟ್ಟೆ ಸಮೀಪದ ಬ್ಲೂ ಪೀನ್ ಬೀಚ್ ಸ್ಟೇಟ್ ರೆಸಾರ್ಟ್ ಎದುರಿನ ಸಮುದ್ರ ತೀರದಲ್ಲಿ ಅಮಲಿನಲ್ಲಿ ತೇಲಾಡುತ್ತಿದ್ದಾಗ, ಸಂಶಯಗೊಂಡ ಪೋಲಿಸರು ಗೋಕರ್ಣ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ.

ವೈದ್ಯಕೀಯ ಪರೀಕ್ಷೆಯಲ್ಲಿ ಡ್ರಗ್ ಸ್ಕ್ರೀನ್ ಟೆಸ್ಟ್ ಪಾಸಿಟಿವ್ ಬಂದಿರುವುದಾಗಿ ವೈದ್ಯಾಧಿಕಾರಿಗಳು ವರದಿ ನೀಡಿದ್ದಾರೆ. ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾದಕ ವಸ್ತು ಸೇವನೆ ಮಾಡಿದ ಆರೋಪದ ಮೇಲೆ ಇವರ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯ ಕಲಂ 27(b) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಈ ಕುರಿತು ಗೋಕರ್ಣ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಶ್ರೀಧರ್ ಅವರ ಮಾರ್ಗದರ್ಶನದಲ್ಲಿ ತನಿಖೆ ಮುಂದುವರಿದಿದೆ.