Udupi| ಜಿಲ್ಲೆಯ ಮಲ್ಪೆ ಬೀಚ್ ಹಾಗೂ ತ್ರಾಸಿ ಮರವಂತೆ ಬೀಚ್‌ಗಳಲ್ಲಿ ಜೀವರಕ್ಷಕ ಸಿಬ್ಬಂದಿಗಳನ್ನು ಪ್ರವಾಸೋದ್ಯಮ ಇಲಾಖೆ ವತಿಯಿಂದ ನಿಯೋಜಿಸಲು ಉದ್ದೇಶಿಸಿದ್ದು, ಜಿಲ್ಲೆಯಲ್ಲಿ ಜೀವರಕ್ಷಕ ತರಬೇತಿ ಹೊಂದಿರುವ ಸಿಬ್ಬಂದಿಗಳಿಂದ ಈ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹14,958 ವೇತನದೊಂದಿಗೆ ಪಿ.ಎಫ್ ಹಾಗೂ ಇ.ಎಸ್.ಐ ಸೌಕರ್ಯ ಕಲ್ಪಿಸಲಾಗುವುದು. ಬೀಚ್ ಜೀವರಕ್ಷಕ ತರಬೇತಿ ಪಡೆದು ಪ್ರಮಾಣ ಪತ್ರ ಹೊಂದಿರುವ ಕನಿಷ್ಟ 18 ರಿಂದ 40 ವರ್ಷದೊಳಗಿನ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಏಪ್ರಿಲ್ 15 ಕೊನೆಯ ದಿನವಾಗಿದೆ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಕಛೇರಿ, ಪ್ರವಾಸೋದ್ಯಮ ಇಲಾಖೆ, ಉಡುಪಿ ಜಿಲ್ಲಾಧಿಕಾರಿಗಳ ಕಛೇರಿ ಸಂಕೀರ್ಣ, ಎ ಬ್ಲಾಕ್, ಎರಡನೇ ಮಹಡಿ, ಕೊಠಡಿ ಸಂಖ್ಯೆ: 303, ಮಣಿಪಾಲ ದೂರವಾಣಿ ಸಂಖ್ಯೆ: 0820-2574868 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.
