ಕಾರವಾರ: ಮತದಾರರ ಪಟ್ಟಿ ಪರಿಷ್ಕರಣೆ ಸಂದರ್ಭದಲ್ಲಿ ಯಾವುದೇ ನ್ಯೂನ್ಯತೆಗಳು ಉಂಟಾಗದಂತೆ ಎಚ್ಚರಿಕೆ ವಹಿಸಿ, ಪಾರದರ್ಶಕ ಮತದಾರರ ಯಾದಿ ಸಿದ್ಧಪಡಿಸಬೇಕು. ಅರ್ಹ ಮತದಾರರು ಮತದಾನ ಹಕ್ಕಿನಿಂದ ವಂಚಿತರಾಗದಂತೆ ಎಲ್ಲ ಅರ್ಹರನ್ನು ಪಟ್ಟಿಗೆ ಸೇರ್ಪಡೆಗೊಳಿಸುವ ಕಾರ್ಯ ನಡೆಯಬೇಕು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಹಾಗೂ ಕಾರವಾರ-ಅಂಕೋಲಾ ಕ್ಷೇತ್ರದ ಮಾಜಿ ಶಾಸಕಿ ರೂಪಾಲಿ ಎಸ್. ನಾಯ್ಕ ಹೇಳಿದರು.

ಕಾರವಾರ ಗ್ರಾಮೀಣ ಮಂಡಲ ವ್ಯಾಪ್ತಿಯ ಮಾಜಾಳಿ, ಚಿತ್ತಾಕುಲ, ಮಲ್ಲಾಪುರ, ಕಡವಾಡ ಹಾಗೂ ಚೆಂಡಿಯಾ ಮಹಾಶಕ್ತಿ ಕೇಂದ್ರಗಳಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಸಂಬಂಧ ಪಕ್ಷದ ತಂಡಗಳೊಂದಿಗೆ ನಡೆದ ವಿಶೇಷ ಸಭೆಯಲ್ಲಿ ಅವರು ಮಾತನಾಡಿದರು.

ಮತದಾರರ ಪಟ್ಟಿ ಪರಿಷ್ಕರಣೆಗೆ ಸಂಬಂಧಿಸಿದಂತೆ ಪಕ್ಷದಿಂದ ಬಿಎಲ್‌ಒ-2, ಬೂತ್ ಅಧ್ಯಕ್ಷರು, ಸದಸ್ಯರ ತಂಡಗಳು ಹಾಗೂ ಮಹಿಳಾ ಪ್ರಮುಖರು ಈಗಾಗಲೇ ಕಾರ್ಯೋನ್ಮುಖರಾಗಿದ್ದಾರೆ. ಎಸ್‌ಐಆರ್ ಪ್ರಕ್ರಿಯೆ ವೇಳೆ ಎಲ್ಲರೂ ತಮ್ಮ ಜವಾಬ್ದಾರಿಯನ್ನು ಅರಿತು ದಕ್ಷತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ಬಿಜೆಪಿ ಗ್ರಾಮೀಣ ಮಂಡಲ ಅಧ್ಯಕ್ಷ ಗ್ರಾಮೀಣ ಮಂಡಲ ಅಧ್ಯಕ್ಷ ಸುಭಾಷ್ ಗುನಗಿ, ರಾಘು ಭಟ್, ಮಂಡಲ ಪ್ರಧಾನ ಕಾರ್ಯದರ್ಶಿ ಸೂರಜ್ ದೇಸಾಯಿ, ರಾಜೇಶ್ ಹೊಸಾಳಿಕರ್, ಉಪಾಧ್ಯಕ್ಷರಾದ ಸಂಜಯ್ ಸಾಳಂಕೆ, ಮಾರುತಿ ರಾಣೆ, ದೀಪಕ ದೇಸಾಯಿ ಸೇರಿದಂತೆ ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.