Weather-based insurance coverage for areca and pepper growers|Uttara Kannada|Karwar|MP Vishweshwar Hegde Kageri| ಜಿಲ್ಲೆಯ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಾರರಿಗೆ ಹವಾಮಾನ ಆಧಾರಿತ ಬೆಳೆ ವಿಮೆಯ ಮೊತ್ತವನ್ನು ರೈತರ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡುವ ಪ್ರಕ್ರಿಯೆ ಆರಂಭವಾಗಿದೆ ಎಂದು‌ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.

ಮೊದಲ ಹಂತವಾಗಿ ಸುಮಾರು 14 ಕೋಟಿ ರೂ. ಮೊತ್ತವನ್ನು ಅರ್ಹ ರೈತರ ಖಾತೆಗಳಿಗೆ ಜಮೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಈ ಪ್ರಕ್ರಿಯೆ ಹಂತ ಹಂತವಾಗಿ ಮುಂದುವರಿಯಲಿದ್ದು, ಜಿಲ್ಲೆಯ ಎಲ್ಲಾ ಅರ್ಹ ರೈತರಿಗೆ ವಿಮೆಯ ಸೌಲಭ್ಯ ತಲುಪಲಿದೆ.

ಜಿಲ್ಲೆಯಲ್ಲಿ ಎಲೆ ಚುಕ್ಕಿ ರೋಗದ ಬಾಧೆ ಹಾಗೂ ಇಳುವರಿ ಕುಂಠಿತದಿಂದ ರೈತರು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದರು. ಇದಲ್ಲದೆ ತಾಂತ್ರಿಕ ಕಾರಣಗಳಿಂದ ಬೆಳೆ ವಿಮೆಯ ಮೊತ್ತ ಬಿಡುಗಡೆ ವಿಳಂಬವಾಗಿದ್ದರಿಂದ ರೈತರು ಕಂಗಾಲಾಗಿದ್ದರು. ಇದೀಗ ವಿಮೆ ಜಮೆ ಪ್ರಾರಂಭವಾಗಿರುವುದು ಜಿಲ್ಲೆಯ ಕೃಷಿಕರಲ್ಲಿ ನೆಮ್ಮದಿಯ ವಾತಾವರಣ ಮೂಡಿಸಿದೆ.

ಇನ್ನು ರೈತರಿಗೆ ಶೀಘ್ರವಾಗಿ ಬೆಳೆ ವಿಮೆ ದೊರಕುವಂತೆ ಕ್ರಮ ಕೈಗೊಂಡಿರುವುದಕ್ಕಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ ಅವರಿಗೆ ಅಭಿನಂದನೆ ಸಲ್ಲಿಸುವುದಾಗಿ ಕಾಗೇರಿ ತಿಳಿಸಿದ್ದಾರೆ.