ಉತ್ತರಕನ್ನಡ ಜಿಲ್ಲೆಯಲ್ಲಿ ಮುಂಡಗೋಡು ತಾಲೂಕಿನ ಕೊಳಗಿ ಅರಣ್ಯ ಪ್ರದೇಶದಲ್ಲಿ ರುಂಡವಿಲ್ಲದ ಮಹಿಳೆಯ ಬೆತ್ತಲೆ ದೇಹ ಇಂದು ಸಂಜೆ ಪತ್ತೆಯಾಗಿದೆ.
ಎರಡು ದಿನಗಳ ಹಿಂದೆ ಮಹಿಳೆಯನ್ನು ಹತ್ಯೆ ಮಾಡಿ ಅರಣ್ಯ ಪ್ರದೇಶದಲ್ಲಿ ಎಸೆದು ಹೋಗಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ಮುಂಡಗೋಡ ಪೊಲೀಸರು ದೌಡಾಯಿಸಿದ್ದು, ತನಿಖೆ ಮುಂದುವರಿಸಿದ್ದಾರೆ. ಇನ್ನು
ಮೃತ ದೇಹದ ಮೈಮೇಲೆ ಲಿಂಗವಿದ್ದು, ಲಿಂಗಾಯತ್ ಸಮುದಾಯದ ಮಹಿಳೆ ಎನ್ನಲಾಗಿದೆ. ಸದ್ಯ ಮುಂಡಗೋಡ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತ ಮಹಿಳೆ ಯಾರು, ಆಕೆಯ ವಿಳಾಸ ಹಾಗೂ ಕೊಲೆ ಮಾಡಿದವರನ್ನು ಪತ್ತೆ ಹಚ್ಚಲು ತನಿಖೆ ಮುಂದುವರಿಸಿದ್ದಾರೆ.
