Karwar| ಭಟ್ಕಳದ ಮುರಿನಕಟ್ಟೆ ಘಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ವಿಡಿಯೋ ಹರಿ ಬಿಟ್ಟ ಆರೋಪದ ಮೇಲೆ ಪೋಲಿಸರು ಯುಟ್ಯೂಬರ್ ನನ್ನು ಬಂಧಿಸಿದ್ದಾರೆ.

ಭಟ್ಕಳದ ಆಜಾದನಗರದ ಮೊತೀಬ್ ಮಹಮ್ಮದ್ ತಂದೆ ಮಹಮ್ಮದ್ ಅಶ್ರಫ್ ಎಂಬಾತನೇ ಘಟನೆಗೆ ಪ್ರಚೋದನೆ ನೀಡಿದ ಆರೋಪದಡಿ ಬಂಧಿತನಾದ ಆರೋಪಿ.

ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ಸರ್ಕಾರಿ ಜಾಗದಲ್ಲಿ ಅಮ್ಮನವರ ಹೊರೆ ಇಡುವ ಮುರಿನಕಟ್ಟೆ ನಿರ್ಮಾಣ ಮಾಡಲಾಗುತ್ತಿದ್ದ ಸಮಯದಲ್ಲಿ ಆರೋಪಿಯು ವಿಡಿಯೋ ಚಿತ್ರೀಕರಣ ಮಾಡಿ, ಪ್ರಚೋದನಾಕಾರಿಯಾಗಿ ಆ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿ ಘಟನೆಗೆ ಪ್ರಚೋದನೆ ನೀಡಿದ್ದ ಎನ್ನಲಾಗಿದೆ. ಇದೇ ಆರೋಪದ ಮೇಲೆ ಪೋಲಿಸರು ಆತನ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ನ್ಯಾಯಾಲಯ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಇನ್ನು ಮುರಿನಕಟ್ಟೆ ವಿಷಯಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರು ಸುಳ್ಳು ವದಂತಿಗಳಿಗೆ ಕಿವಿಗೊಡದಂತೆ ಪೋಲಿಸ್ ಇಲಾಖೆ ವಿನಂತಿಸಿದೆ. ಸಾಮಾಜಿಕ ಜಾಲ ತಾಣಗಳ ಮೇಲೆ ಪೋಲಿಸ್ ಇಲಾಖೆ ನಿಗಾ ವಹಿಸುತ್ತಿದೆ. ಕಾನೂನು ಸುವ್ಯಸ್ಥೆಗೆ ಧಕ್ಕೆ ಉಂಟಾಗುವಂತಹ ಪ್ರಚೋದನಾಕಾರಿಯಾದ ಅಥವಾ ಸುಳ್ಳು ಸಂದೇಶಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಡಿದಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದೆಂದು ಪೋಲಿಸ್ ಇಲಾಖೆ ಎಚ್ಚರಿಕೆ ನೀಡಿದೆ.